Indian Language Bible Word Collections
Psalms 85:1
Psalms Chapters
Psalms 85 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 85 Verses
1
ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
2
ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!
3
ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.
4
ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
5
ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?
6
ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.
7
ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು.
8
ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
9
ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
10
ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
11
ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು. [*ನಿವಾಸಿ … ಒಳ್ಳೆಯವನಾಗಿರುವನು ಅಕ್ಷರಶಃ, “ನಿಷ್ಠತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.”]
12
ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
13
ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.