Bible Languages

Indian Language Bible Word Collections

Bible Versions

Books

Psalms Chapters

Psalms 85 Verses

Bible Versions

Books

Psalms Chapters

Psalms 85 Verses

1 ರಚನೆಗಾರರು : ಕೋರಹೀಯರು. ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!
3 ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.
4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?
6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.
7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು.
8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.
12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.

Psalms 85:2 Kannada Language Bible Words basic statistical display

COMING SOON ...

×

Alert

×