1
|
ರಚನೆಗಾರರು : ಕೋರಹೀಯರಿಗೆ ಸೇರಿದ ಚೇರಹ ಕುಟುಂಬದ ಹೇಮಾನ. ಯೆಹೋವದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ. |
2
|
ನನ್ನ ಪ್ರಾರ್ಥನೆಗಳಿಗೆ ದಯವಿಟ್ಟು ಗಮನಕೊಡು. ಕರುಣೆಗೋಸ್ಕರ ನಾನಿಡುವ ಮೊರೆಗಳನ್ನು ಆಲಿಸು. |
3
|
ನನ್ನ ಜೀವವು ನೋವಿನಿಂದ ತುಂಬಿಹೋಯಿತು. ಮರಣವು ನನಗೆ ಸಮೀಪವಾಗಿದೆ. |
4
|
ಜನರು ನನ್ನನ್ನು ಸತ್ತವನಂತೆಯೂ ಬದುಕಲಾರದ ಬಲಹೀನನಂತೆಯೂ ಪರಿಗಣಿಸಿದ್ದಾರೆ. |
5
|
ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ. |
6
|
ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ. |
7
|
ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದಲೇ ನನ್ನನ್ನು ಶಿಕ್ಷಿಸಿದೆ. |
8
|
ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಾಲಾರೆನು. |
9
|
ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು! |
10
|
ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವಿಯಾ? ಇಲ್ಲ! ದೆವ್ವಗಳು ಎದ್ದು ನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ! |
11
|
ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು. |
12
|
ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು. |
13
|
ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ. |
14
|
ಯೆಹೋವನೇ, ನೀನು ನನ್ನನ್ನು ತೊರೆದು ಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ? |
15
|
ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ. |
16
|
ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ. |
17
|
ಬಾಧೆಗಳೂ ನೋವುಗಳೂ ಯಾವಾಗಲೂ ನನ್ನೊಂದಿಗಿವೆ. ಬಾಧೆಗಳಿಂದಲೂ ನೋವುಗಳಿಂದಲೂ ಮುಳುಗಿ ಹೋಗುತ್ತಿದ್ದೇನೆ. |
18
|
ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ. |
Psalms 88:2 Kannada Language Bible Words basic statistical display
COMING SOON ...