1
|
ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು! |
2
|
ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ. |
3
|
ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ, |
4
|
“ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.” |
5
|
ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು. |
6
|
ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು. |
7
|
ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು. |
8
|
ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ನಮ್ಮ ಸಂಪೂರ್ಣಭರವಸೆಗೆ ಯೋಗ್ಯನಾಗಿರುವೆ. |
9
|
ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ. |
10
|
ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟಿ. |
11
|
ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. |
12
|
ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ. |
13
|
ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ! |
14
|
ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ. |
15
|
ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ. |
16
|
ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು. |
17
|
ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ. |
18
|
ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು. |
19
|
ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ. |
20
|
ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ. |
21
|
ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ. |
22
|
ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ. ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ. |
23
|
ನಾನು ಅವನ ಶತ್ರುಗಳನ್ನು ಮುಗಿಸಿದೆನು. ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು. |
24
|
ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೇ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು. |
25
|
ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ಅವನು ನದಿಗಳನ್ನು ಹತೋಟಿಯಲ್ಲಿಡುವನು. |
26
|
ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು. |
27
|
ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು. |
28
|
ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು. |
29
|
ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು. |
30
|
ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದು ಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು. |
31
|
ನಾನು ಆರಿಸಿಕೊಂಡ ರಾಜನ ಸಂತತಿಯವರು ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿ ನನ್ನ ಆಜ್ಞೆಗಳನ್ನು ಅಲಕ್ಷಿಸಿದರೆ, |
32
|
ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು. |
33
|
ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತು ಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಸ್ತನಾಗಿರುವೆನು. |
34
|
ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ. ಬದಲಾಯಿಸುವುದೂ ಇಲ್ಲ. |
35
|
ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ. |
36
|
ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು. |
37
|
ಅದು ಚಂದ್ರನಂತೆ ಶಾಶ್ವತವಾಗಿರುವುದು. ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ.” |
38
|
ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ. |
39
|
ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ. |
40
|
ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲ ನಾಶಮಾಡಿದೆ. |
41
|
ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು. |
42
|
ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿದೆ. |
43
|
ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೊ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ. |
44
|
ನೀನು ಅವನ ತೇಜಸ್ಸನ್ನು ತಡೆದುಬಿಟ್ಟಿದ್ದಿ; ನೀನು ಅವನ ಸಿಂಹಾಸನವನ್ನು ನೆಲಕ್ಕೆ ಉರುಳಿಸಿಬಿಟ್ಟೆ. |
45
|
ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ. |
46
|
ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೊ? |
47
|
ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ. |
48
|
ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು. |
49
|
ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ! |
50
|
[This verse may not be a part of this translation] |
51
|
[This verse may not be a part of this translation] |
52
|
ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್! |
Psalms 89:1 Kannada Language Bible Words basic statistical display
COMING SOON ...