Bible Languages

Indian Language Bible Word Collections

Bible Versions

Books

Psalms Chapters

Psalms 90 Verses

Bible Versions

Books

Psalms Chapters

Psalms 90 Verses

1 ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.
2 ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
3 ಜನರಿಗೆ ಜನ್ಮ ನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.
4 ಸಾವಿರ ವರುಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.
5 ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.
6 ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.
7 ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.
8 ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.
9 ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ಪಿಸುಮಾತಿನಂತೆ ತೀರಿಹೋದವು.
10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿಹೋಗುತ್ತೇವೆ.
11 ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.
12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.
13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.
14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.
16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.
17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.

Psalms 90:1 Kannada Language Bible Words basic statistical display

COMING SOON ...

×

Alert

×