1
|
ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. |
2
|
ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ, ನನ್ನ ಕೋಟೆಯೂ, ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು. |
3
|
ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. |
4
|
ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ. |
5
|
ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ. |
6
|
ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ. |
7
|
ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು. |
8
|
ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ. |
9
|
ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ. |
10
|
ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು. |
11
|
ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು. |
12
|
ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. |
13
|
ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ. |
14
|
ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು. |
15
|
ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನ ಪಡಿಸುವೆನು. |
16
|
ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.” |
Psalms 91:14 Kannada Language Bible Words basic statistical display
COMING SOON ...