1
|
ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ. |
2
|
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ! |
3
|
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. |
4
|
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. |
5
|
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ. |
Psalms 93:1 Kannada Language Bible Words basic statistical display
COMING SOON ...