1
|
ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು! |
2
|
ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು. |
3
|
ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು? |
4
|
ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬಕೊಚ್ಚಿ ಕೊಳ್ಳುವರು? |
5
|
ಯೆಹೋವನೇ, ಅವರು ನಿನ್ನ ಜನರಿಗೆ ಕೇಡು ಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ. |
6
|
ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆಮಾಡುವರು. |
7
|
ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ. |
8
|
ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. |
9
|
ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ? |
10
|
ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ. |
11
|
ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ. |
12
|
ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿ ಮಾರ್ಗವನ್ನು ಉಪದೇಶಿಸುವನು. |
13
|
ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ. |
14
|
ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ. |
15
|
ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು. |
16
|
ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ. |
17
|
ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. |
18
|
ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು. |
19
|
ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ. |
20
|
ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು. |
21
|
ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು. |
22
|
ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ! |
23
|
ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವಾರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶ ಮಾಡುವನು. |
Psalms 94:3 Kannada Language Bible Words basic statistical display
COMING SOON ...