Bible Languages

Indian Language Bible Word Collections

Bible Versions

Books

Psalms Chapters

Psalms 95 Verses

Bible Versions

Books

Psalms Chapters

Psalms 95 Verses

1 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
2 ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
3 ಯಾಕಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
4 ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
5 ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ.
6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
8 ದೇವರು ಇಂತೆನ್ನುತ್ತಾನೆ: “ನೀವು ಮೆರೀಬದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡರಾಗಿರಬೇಡಿ.
9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

Psalms 95:1 Kannada Language Bible Words basic statistical display

COMING SOON ...

×

Alert

×