Bible Languages

Indian Language Bible Word Collections

Bible Versions

Books

Psalms Chapters

Psalms 96 Verses

Bible Versions

Books

Psalms Chapters

Psalms 96 Verses

1 ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.
2 ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ!
3 ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.
4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು.
5 ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.
6 ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.
7 ಭೂಜನಾಂಗಗಳೇ, ಸ್ತುತಿಗೀತೆಗಳನ್ನು ಹಾಡುತ್ತಾ ಯೆಹೋವನನ್ನು ಮಹಿಮೆಪಡಿಸಿರಿ.
8 ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ.
9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.
10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.
11 ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!
12 ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ! ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ!
13 ಯಾಕಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.

Psalms 96 Verses

Psalms 96 Chapter Verses Kannada Language Bible Words display

COMING SOON ...

×

Alert

×