1
|
ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ. |
2
|
ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ! |
3
|
ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ. |
4
|
ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು. |
5
|
ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು. |
6
|
ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ. |
7
|
ಭೂಜನಾಂಗಗಳೇ, ಸ್ತುತಿಗೀತೆಗಳನ್ನು ಹಾಡುತ್ತಾ ಯೆಹೋವನನ್ನು ಮಹಿಮೆಪಡಿಸಿರಿ. |
8
|
ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ. |
9
|
ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ. |
10
|
ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು. |
11
|
ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ! |
12
|
ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ! ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ! |
13
|
ಯಾಕಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು. |
Psalms 96:3 Kannada Language Bible Words basic statistical display
COMING SOON ...