Bible Languages

Indian Language Bible Word Collections

Bible Versions

Books

Psalms Chapters

Psalms 98 Verses

Bible Versions

Books

Psalms Chapters

Psalms 98 Verses

1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
2 ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.
3 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
4 ಇಸ್ರೇಲರ ಕಡೆಗಿದ್ದ ಆತನ ಪ್ರೀತಿ ಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
5 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!
6 ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.
7 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!
8 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.
9 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!

Psalms 98:8 Kannada Language Bible Words basic statistical display

COMING SOON ...

×

Alert

×