ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.
ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.
ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.
ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.
ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.
“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”
ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.