1
|
ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು. |
2
|
ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.” |
3
|
ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು. |
4
|
ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ. |
5
|
ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದು ನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ. |
6
|
ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿ ಕೊಡಿರಿ. |
7
|
ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ؆ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ. |
8
|
ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ. |
9
|
”ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು. |
10
|
ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!؆ |
11
|
”ಭೂಲೋಕದ ವರ್ತಕರು ಬಾಬಿಲೋನಿನ ವಿಷಯ ದಲ್ಲಿ ಗೋಳಾಡುವರು ಮತ್ತು ದುಃಖಿಸುವರು. ಅವರು ಮಾರುವ ವಸ್ತುಗಳನ್ನು ಕೊಂಡುಕೊಳ್ಳಲು ಯಾರೂ ಇಲ್ಲದಿರುವುದರಿಂದ ಅವರು ದುಃಖಿಸುವರು. |
12
|
ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾಬಗೆಯ ವಸ್ತ್ರಗಳು, ಬೆಲೆಬಾಳುವ ಮರದಿಂದ ಮಾಡಿದ ವಸ್ತುಗಳು, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತಶಿಲೆ ಇವುಗಳನ್ನು ಮಾರುತ್ತಾರೆ. |
13
|
ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು: |
14
|
ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು. ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು. ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.؆ |
15
|
”ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ. |
16
|
ಅವರು ದುಃಖದಿಂದ ಗೋಳಾಡುತ್ತಾ ಇಂತೆನ್ನುವರು: ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು! |
17
|
ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!؆ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು |
18
|
ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, “ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!” ಎಂದು ಹೇಳಿದರು. |
19
|
ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು! |
20
|
ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.”؆ |
21
|
ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ. |
22
|
ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. |
23
|
ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು. |
24
|
ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.” |
Revelation 18:1 Kannada Language Bible Words basic statistical display
COMING SOON ...