Bible Languages

Indian Language Bible Word Collections

Bible Versions

Books

Revelation Chapters

Revelation 3 Verses

Bible Versions

Books

Revelation Chapters

Revelation 3 Verses

1 ”ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.
2 ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.
3 ಆದುದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.
4 ”ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.
5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
6 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.
7 ”ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.
8 ”ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.
9 ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.
10 ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.
11 ”ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.
12 ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
13 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.
14 ”ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:
15 ”ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!
16 ಆದರೆ ನೀನು ಬಿಸಿಯೂ ಇಲ್ಲದೆ ತಣ್ಣಗೂ ಇಲ್ಲದೆ ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯಿಂದ ಉಗುಳಿ ಬಿಡುವೆನು.
17 ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.
18 ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
19 ”ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.
20 ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.
21 ”ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.
22 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.”

Revelation 3:1 Kannada Language Bible Words basic statistical display

COMING SOON ...

×

Alert

×