ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ [*ಕೂಪ ನೋಡಿರಿ: ಪ್ರಕಟನೆ 20:1-3.] ಹೋಗುವ ಬೀಗದ ಕೈ ಕೊಡಲ್ಪಟ್ಟಿತು.
ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.
ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.
ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.
ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.
ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.