ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” [✡ಉಲ್ಲೇಖನ: ಯಾಜಕ. 18:5.] ಎಂದು ಮೋಶೆ ಹೇಳಿದ್ದಾನೆ.
ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’ ” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.)
ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.
“ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.
ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.
ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?
ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” [✡ಉಲ್ಲೇಖನ: ಯೆಶಾಯ 53:1.] ಎಂದು ಯೆಶಾಯ ಹೇಳಿದ್ದಾನೆ.
ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಕೀರ್ತನೆ. 19:4]
“ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಧರ್ಮೋಪದೇಶ. 32:21
ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಯೆಶಾಯ 65:1]