Bible Languages

Indian Language Bible Word Collections

Bible Versions

Books

Romans Chapters

Romans 16 Verses

Bible Versions

Books

Romans Chapters

Romans 16 Verses

1 ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.
2 ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.
3 ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ.
4 ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.
5 ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.
6 ಮರಿಯಳಿಗೆ ನನ್ನ ವಂದನೆ ತಿಳಿಸಿರಿ. ಆಕೆ ನಿಮಗೋಸ್ಕರ ಬಹು ಕಷ್ಟಪಟ್ಟು ಕೆಲಸ ಮಾಡಿದಳು.
7 ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.
8 ಪ್ರಭುವಿನಲ್ಲಿ ನನ್ನ ಪ್ರಿಯ ಸ್ನೇಹಿತನಾದ ಅಂಪ್ಲಿಯಾತನಿಗೆ ನನ್ನ ವಂದನೆ ತಿಳಿಸಿರಿ.
9 ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ.
10 ಅಪೆಲ್ಲನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನನ್ನು ನಿಜವಾಗಿಯೂ ಪ್ರೀತಿಸುತ್ತಾನೆಂಬುದನ್ನು ಪರೀಕ್ಷಿಸಿ ನಿರೂಪಿಸಲಾಗಿದೆ. ಅರಿಸ್ತೊಬೂಲನ ಕುಟುಂಬದಲ್ಲಿ ಇರುವವರಿಗೆಲ್ಲ ನನ್ನ ವಂದನೆ ತಿಳಿಸಿರಿ.
11 ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.
12 ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.
13 ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.
14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಕ್ರೈಸ್ತ ಸಹೋದರರಿಗೂ
15 ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರಿಗೂ ಮತ್ತು ಒಲುಂಪನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೆ ನನ್ನ ವಂದನೆ ತಿಳಿಸಿರಿ.
16 ನೀವು ಪರಸ್ಪರ ಸಂಧಿಸುವಾಗ ಪವಿತ್ರವಾದ ಮುದ್ದನ್ನಿಟ್ಟು ವಂದಿಸಿರಿ. ಕ್ರಿಸ್ತನ ಸಭೆಗಳವರೆಲ್ಲಾ ನಿಮಗೆ ವಂದನೆ ತಿಳಿಸುತ್ತಾರೆ.
17 ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.
18 ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.
19 ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
20 ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
21 ನನ್ನ ಸಹೋದ್ಯೋಗಿಯಾದ ತಿಮೊಥೆಯನು ಮತ್ತು ನನ್ನ ಸಂಬಂಧಿಕರಾದ ಲೂಕ್ಯ, ಯಾಸೋನ ಮತ್ತು ಸೋಸಿಪತ್ರ ನಿಮಗೆ ವಂದನೆ ತಿಳಿಸಿದ್ದಾರೆ.
22 ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.
23 ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.
24 [This verse may not be a part of this translation]
25 ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೆ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.
26 ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
27 ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.

Romans 16:1 Kannada Language Bible Words basic statistical display

COMING SOON ...

×

Alert

×