1
|
ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ. |
2
|
ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ. |
3
|
ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ. |
4
|
ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು. |
5
|
ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್. |
6
|
ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. |
7
|
ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ಎಂದು ಹೇಳಿದನು. |
8
|
ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗಿದ್ದಾರೆ. ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ. |
9
|
[This verse may not be a part of this translation] |
10
|
ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡು ಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು. |
11
|
[This verse may not be a part of this translation] |
12
|
[This verse may not be a part of this translation] |
13
|
ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ. |
14
|
ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ. |
15
|
ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ. |
16
|
ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ. |
17
|
ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ. |
18
|
ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ. |
19
|
”ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು. |
20
|
ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ? |
21
|
ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು. |
22
|
ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು. |
23
|
ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು. |
24
|
ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು. |
25
|
ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23 |
26
|
”ಮತ್ತು ಯಾವ ಸ್ಥಳದಲ್ಲಿ ದೇವರು, ನೀವು ನನ್ನ ಜನರಲ್ಲ؆ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10 |
27
|
ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು. |
28
|
ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.” |
29
|
ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9 |
30
|
ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು. |
31
|
ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು. |
32
|
ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು. |
33
|
ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿ ಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿ ಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಯೆಶಾಯ 8:14; 28:16 |
Romans 9:21 Kannada Language Bible Words basic statistical display
COMING SOON ...