ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.
ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.
ಅವಳು ಇಂದು ಬೆಳಗಿನ ಜಾವದಲ್ಲಿ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು.
ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.
ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.
ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು [*ಆಶ್ರಯ ಅಕ್ಷರಶಃ, ಆತನ ರೆಕ್ಕೆಗಳ ಮರೆಯನ್ನು.] ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.
ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.
ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.
ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು [†ಮೂವತ್ತು ಸೇರು ಅಕ್ಷರಶಃ, ಒಂದು ಏಫಾ.] ಜವೆಗೋಧಿ ಸಿಕ್ಕಿತ್ತು.
ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು. ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.
ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.