1
|
ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು. |
2
|
ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ. |
3
|
ನನ್ನ ಪ್ರಿಯನು ನನ್ನವನೇ; ನಾನು ಅವನವಳೇ. ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ. |
4
|
ನನ್ನ ಪ್ರಿಯಳೇ, ನೀನು ತಿರ್ಚ ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು. |
5
|
ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಉದ್ರೇಕಗೊಳಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ. |
6
|
ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿ ಮಂದೆಯಂತಿವೆ. |
7
|
ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ. |
8
|
ಅರವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದಷ್ಟು ಯುವತಿಯರೂ ನನಗಿದ್ದಾರೆ. |
9
|
ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು. |
10
|
ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು? |
11
|
ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಾಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು. |
12
|
ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು. |
13
|
ಶೂಲಾಮಿತಳೇ, ಹಿಂತಿರುಗಿ ಬಾ, ಹಿಂತಿರುಗಿ ಬಾ, ಹಿಂತಿರುಗಿ ಬಾ, ಹಿಂತಿರುಗಿ ಬಾ, ನಾವು ನಿನ್ನನ್ನು ನೋಡಬೇಕು! ಮಹನಯಿಮ್ ನೃತ್ಯವನ್ನು ನೋಡುವಂತೆ ಶೂಲಾಮಿತಳನ್ನೇಕೆ ನೀವು ದೃಷ್ಟಿಸಿ ನೋಡುತ್ತಿರುವಿರಿ? |
Song-of-Solomon 6:16 Kannada Language Bible Words basic statistical display
COMING SOON ...