1
|
ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ. |
2
|
ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ ಗುಂಡು ಬಟ್ಟಲಿನಂತಿದೆ; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಧಿಯ ರಾಶಿಯಂತಿದೆ. |
3
|
ನಿನ್ನ ಸ್ತನಗಳು ಪ್ರಾಯದ ಸಾರಂಗದ ಎರಡು ಅವಳಿ ಮರಿಗಳಂತಿವೆ. |
4
|
ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬತ್ರಬ್ಬೀಮ್ನ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ. |
5
|
ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಷ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ! |
6
|
ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ. ನಿನ್ನ ರೂಪ ಮನೋಹರ; ನಿನ್ನ ಪ್ರೇಮವು ಆನಂದ ಪೂರ್ಣವಾಗಿದೆ. |
7
|
ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ. ನಿನ್ನ ಸ್ತನಗಳು ಖರ್ಜೂರ ಮರದ ಹಣ್ಣಿನ ಗೊಂಚಲುಗಳಂತಿವೆ. |
8
|
ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ. |
9
|
ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದು ಹೋಗುವುದು. |
10
|
ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ. |
11
|
ನನ್ನ ಪ್ರಿಯನೇ, ಬಾ! ನಾವು ತೋಟಕ್ಕೆ ಹೋಗೋಣ, ನಾವು ಹಳ್ಳಿಗಳಲ್ಲಿ ಇರೋಣ. |
12
|
ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು. |
13
|
ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ. |
Song-of-Solomon 7:5 Kannada Language Bible Words basic statistical display
COMING SOON ...