Bible Languages

Indian Language Bible Word Collections

Bible Versions

Books

Song of Solomon Chapters

Song of Solomon 8 Verses

Bible Versions

Books

Song of Solomon Chapters

Song of Solomon 8 Verses

1 ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!
2 ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.
3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳುತ್ತಿತ್ತು.
4 ಜೆರುಸಲೇಮಿನ ಸ್ತ್ರೀಯರೇ, ತಕ್ಕ ಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣ ಮಾಡಿರಿ.
5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.
6 ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.
7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.
8 ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?
9 [This verse may not be a part of this translation]
10 ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.
11 ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿ ತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.
12 ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.
13 ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.
14 ನನ್ನ ಪ್ರಿಯನೇ, ತ್ವರೆಪಡು. ಸುಗಂಧ ಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು. ಇ್ಟ್ಟ್ಞ ್ಟಜಿ ಜ್ಛ್ಛಟಜಡ್ಝಛಡಿಜಡ

Song-of-Solomon 8:1 Kannada Language Bible Words basic statistical display

COMING SOON ...

×

Alert

×