1
|
ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ. |
2
|
ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ. |
3
|
ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು. |
4
|
ಆಗ ನಮ್ಮ ರಕ್ಷಕನಾದ ದೇವರ ಪ್ರೀತಿಯೂ ಕೃಪೆಯೂ ಪ್ರತ್ಯಕ್ಷವಾದವು. |
5
|
ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು. |
6
|
ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. |
7
|
ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ. |
8
|
ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ. |
9
|
[This verse may not be a part of this translation] |
10
|
ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು. |
11
|
ಅಂಥವನು ಕೆಟ್ಟವನೂ ಪಾಪಪೂರಿತನೂ ಆಗಿದ್ದಾನೆ ಎಂಬುದು ನಿನಗೂ ತಿಳಿದಿದೆ. ಅವನು ತನ್ನ ಸ್ವಕಾರ್ಯಗಳಿಂದಲೇ ತಪ್ಪಿತಸ್ಥನೆಂಬ ತೀರ್ಪನ್ನು ಹೊಂದಿದ್ದಾನೆ. |
12
|
ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಈ ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ. |
13
|
ವಕೀಲನಾದ ಜೇನನೂ ಅಪೊಲ್ಲೋಸನೂ ಅಲ್ಲಿಂದ ಪ್ರಯಾಣ ಮಾಡುತ್ತಾರೆ. ಅವರ ಪ್ರಯಾಣಕ್ಕೆ ನಿನ್ನಿಂದ ಸಾಧ್ಯವಾದಷ್ಟು ಸಹಾಯಮಾಡು. ಅವರಿಗೆ ಯಾವ ಕೊರತೆಯೂ ಆಗದಂತೆ ನೋಡಿಕೊ. |
14
|
ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು. |
15
|
ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ. |
Titus 3:11 Kannada Language Bible Words basic statistical display
COMING SOON ...