1
|
ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ, |
2
|
“ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು. |
3
|
ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು. |
4
|
ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿ ಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು. |
5
|
ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು. |
6
|
ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ತಿರುಗಿ ಅರಾಮವಾಗಿ ವಾಸಿಸುವರು.” |
7
|
ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ. |
8
|
ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಒಬ್ಬ ಬಲಹೀನ ಮನಷ್ಯನೂ ದಾವೀದನಂತೆ ಶೂರನಾಗುವನು. ಮತ್ತು ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು. |
9
|
ಯೆಹೋವನು ಹೇಳುವದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ ಜನಾಂಗಗಳನ್ನು ನಾನು ನಾಶಮಾಡುವೆನು. |
10
|
ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆ ಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು. |
11
|
ಜೆರುಸಲೇಮಿನಲ್ಲಿ ಗೋಳಾಟವೂ ದುಃಖವೂ ತುಂಬುವ ಕಾಲವು ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು. |
12
|
ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. |
13
|
ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಮಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. |
14
|
ಅದೇ ರೀತಿಯಲ್ಲಿ ಇತರ ಎಲ್ಲಾ ಕುಲದವರೂ ದುಃಖಿಸುವರು. ಗಂಡಸರೂ ಹೆಂಗಸರೂ ಗೋಳಾಡುವರು.” |
Zechariah 12:1 Kannada Language Bible Words basic statistical display
COMING SOON ...