1
|
ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು. |
2
|
““ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು. |
3
|
ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ. |
4
|
ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.” |
5
|
ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು. |
6
|
“ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. |
7
|
ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಂದು ಹೆಂಗಸು ಇರುವುದನ್ನು ಕಂಡೆನು. |
8
|
ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು. |
9
|
ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು. |
10
|
ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು. |
11
|
“ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು. |
Zechariah 5:11 Kannada Language Bible Words basic statistical display
COMING SOON ...