1
|
ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆ ಇಡುವರು. |
2
|
ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು. |
3
|
ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ದೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ. |
4
|
ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದು ಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು. |
5
|
“ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು. |
6
|
ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. |
7
|
ಅವರು ನಿಷಿದ್ಧ ಆಹಾರ ಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು. |
8
|
ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.” |
9
|
[This verse may not be a part of this translation] |
10
|
ಅರಸನು ಹೀಗನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು. |
11
|
ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದುದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ. |
12
|
ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವದೇನೆಂದರೆ, ನಾನು ತಿರುಗಿ ಬರುತ್ತೇನೆ. |
13
|
ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧ ಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು. |
14
|
ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು. |
15
|
ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು. |
16
|
ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು. |
17
|
ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು. |
Zechariah 9:1 Kannada Language Bible Words basic statistical display
COMING SOON ...