ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.