ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.
ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.