1
|
ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು. |
2
|
ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
3
|
ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. |
4
|
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
5
|
ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
6
|
ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. |
7
|
ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. |
8
|
ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
9
|
ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
10
|
ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
11
|
ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; |
12
|
ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. |
13
|
ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. |
14
|
ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
15
|
ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. |
16
|
ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. |
17
|
ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; |
18
|
ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; |
19
|
ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; |
20
|
ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. |
21
|
ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. |
22
|
ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು. |
23
|
ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. |
24
|
ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ. |
25
|
ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. |
26
|
ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. |
27
|
ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. |
28
|
ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. |
29
|
ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. |
30
|
ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. |
31
|
ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು. |
32
|
ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು. |
33
|
ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು. |
34
|
ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು. |
1-Chronicles 27:25 Kannada Language Bible Words basic statistical display
COMING SOON ...