ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.
ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.