ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.