ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.
ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.