ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ