ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.