ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.