ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.