1
|
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ, |
2
|
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. |
3
|
ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. |
4
|
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ. |
5
|
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. |
6
|
ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು. |
7
|
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ. |
8
|
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. |
9
|
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ. |
10
|
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು. |
11
|
ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್. |
12
|
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ. |
13
|
ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ. |
14
|
ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್. |
1-Peter 5:7 Kannada Language Bible Words basic statistical display
COMING SOON ...