ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.