ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.