ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.