1
|
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು. |
2
|
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು. |
3
|
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. |
4
|
ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. |
5
|
ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ. |
6
|
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು. |
7
|
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು. |
8
|
ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. |
9
|
ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು. |
10
|
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. |
11
|
ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು. |
12
|
ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. |
1-Samuel 5:7 Kannada Language Bible Words basic statistical display
COMING SOON ...