ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.