1
|
ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. |
2
|
ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು. |
3
|
ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು |
4
|
ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. |
5
|
ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು. |
6
|
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು. |
7
|
ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು. |
8
|
ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ-- |
9
|
ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು. |
10
|
ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು |
11
|
ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು. |
12
|
ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. |
13
|
ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ-- |
14
|
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. |
15
|
ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು. |
16
|
ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು. |
17
|
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು. |
18
|
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು. |
19
|
ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು. |
2-Chronicles 10:10 Kannada Language Bible Words basic statistical display
COMING SOON ...