ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.