ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.