ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.