ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.