English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

2 Chronicles Chapters

2 Chronicles 31 Verses

1 ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
3 ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
4 ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
6 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
7 ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
10 ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
11 ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
12 ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
13 ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
14 ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
16 ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
17 ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
18 ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
19 ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.
21 ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
×

Alert

×