ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.